ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ವಾಲಿಬಾಲ್ ಪಂದ್ಯಾಟ ಆಳ್ವಾಸ್‍ನ ಬಾಲಕರಿಗೆ ಪ್ರಶಸ್ತಿ

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಕುಂಬ್ರದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಫೈನಲ್ ಪಂದ್ಯದಲ್ಲಿ ಮಂಗಳೂರು ಗ್ರಾಮಾಂತರ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕರ ತಂಡವು ಮಂಗಳೂರು ನಗರವನ್ನು ಪ್ರತಿನಿಧಿಸಿದ ಸೈಂಟ್ ಅಲೋಸಿಯಸ್ ಪಿ.ಯು. ಕಾಲೇಜು, ಮಂಗಳೂರು ತಂಡವನ್ನು 25-14, 27-17 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆನಂದಿಸಿದ್ದಾರೆ.

Highslide for Wordpress Plugin