ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಪಾಲಕರ ಸಭೆ

ಮೂಡುಬಿದಿರೆ: ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯಲ್ಲಿ ಪಾಲಕರ ಪಾತ್ರ ಮಹತ್ತ್ವದ್ದು. ಹೊರಗಿನ ಆಕರ್ಷಣೆಗೆ ಮತ್ತು ಒತ್ತಡಗಳಿಗೆ ಒಳಗಾಗುತ್ತಿರುವ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಶಿಸ್ತಿನಡಿ ತರಬೇಕಾದರೆ ಕಾಲೇಜು ಮತ್ತು ಮನೆ ಪರಸ್ಪರ ಪೂರಕವಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ಯ ವಿದ್ಯಾರ್ಥಿಗಳ ಪಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಶೈಕ್ಷಣಿಕಾವಧಿಯಲ್ಲಿಯೇ ಪ್ರಮುಖವಾದ ಘಟ್ಟ. ಈ ಹೊತ್ತಿನಲ್ಲಿ ಪಾಲಕರು, ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಒಟ್ಟಿಗೆ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ.  ಕಾಲಕಾಲಕ್ಕೆ ಬೇಕಾದ ಎಲ್ಲ ಬಗೆಯ ಶೈಕ್ಷಣಿಕ ತರಬೇತಿಗಳನ್ನು ಒಂದೇ ಸೂರಿನಡಿ ನೀಡಿ ಎಲ್ಲಾ ರೀತಿಯ ಶೈಕ್ಷಣಿಕ ಸವಾಲುಗಳನ್ನು ಎದುರಿಸಿ ಗೆಲ್ಲುವಂತೆ ಮಾಡುವುದು ಇಂದಿನ ಶಿಕ್ಷಣದ ಮುಂದಿನ ಸವಾಲಾಗಿದೆ ಎಂದು ಅಭಿಪ್ರಾಯಪಟ್ಟರು.
ಆಳ್ವಾಸ್ ಪದವಿ ಪೂರ್ವಕಾಲೇಜಿನ ವಿಜ್ಞಾನ, ವಾಣಿಜ್ಯ ಮತ್ತು  ಕಲಾ ವಿಭಾಗಗಳ  ವಿದ್ಯಾರ್ಥಿಗಳ ಸುಮಾರು ಆರು ಸಾವಿರ ಮಂದಿ ಪಾಲಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಎಂಟು ಹಂತಗಳಲ್ಲಿ ನಡೆದ ಪಾಲಕ ಶಿಕ್ಷಕ ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪೆÇ್ರ. ಎಚ್. ರಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ವೇಣುಗೋಪಾಲ ಶೆಟ್ಟಿ ಹಾಗೂ ಉದಯ್ ಮಂಜುನಾಥ ಆಡೇಮನೆ ಕಾರ್ಯಕ್ರಮ ನಿರೂಪಿಸಿದರು.

Highslide for Wordpress Plugin