ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ


ಮೂಡುಬಿದಿರೆ: ಒಂದು ಭಾಷೆಯನ್ನು ಪ್ರೀತಿಸುವುದು ಎಂದರೆ ಬೇರೆ ಭಾಷೆಯನ್ನು ನಿರಾಕರಿಸುವುದಲ್ಲ. ಪ್ರತಿಯೊಂದು ಭಾಷೆಗೆ ಅದರದ್ದೇ ಮಹತ್ವ ಇದೆ. ನೀಟ್ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕೂಡ ಒಂದು ಅವಿಭಾಜ್ಯ ಅಂಗವೆಂದು ಪರಿಗಣಿಸಿದಲ್ಲಿ, ಅದು ಕನ್ನಡ ಉಳಿವಿಗೆ ಸಹಕಾರಿಯಾಗುತ್ತದೆ ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ.ಸುಧಾರಾಣಿ ಹೇಳಿದರು.
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕನ್ನಡ ಸಂಘದ ವತಿಯಿಂದ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಋತುಮಾನ ವೆಬ್‍ತಾಣ, ಬುಕ್ ಬ್ರಹ್ಮ, ಮೈಲಾಗ್ ಬುಕ್, ರಾಗಕ್ಷರದಂತಹ ಅಪ್ಲಿಕೇಶನ್‍ಗಳು ಭಾಷೆ ಮತ್ತು ತಂತ್ರಜ್ಞಾನವನ್ನು ಸಮೀಕರಿಸುವಲ್ಲಿ ಉತ್ತಮ ಉದಾಹರಣೆಗಳಾಗಿವೆ. ಅದ್ದರಿಂದ ವಿದ್ಯಾರ್ಥಿಗಳು ಕನ್ನಡ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ನಿಮ್ಮ ಪಾತ್ರ ಮಹತ್ವದ್ದು ಎಂದರು.
ಇನ್‍ವೀ ಗ್ರೀನ್ ಬಯೋಟೆಕ್‍ನ ಸ್ಥಾಪಕ ಅಶ್ವತ್ ಹೆಗ್ಡೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಡೊಳ್ಳು ಕುಣಿತ, ನೃತ್ಯ ಪ್ರದರ್ಶನಗೊಂಡಿತು. ವಿದ್ಯಾರ್ಥಿ ಪ್ರಜ್ವಲ್ ಗಾಯನದ ಮೂಲಕ ರಂಜಿಸಿದರು.

Highslide for Wordpress Plugin