News & Events
80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಚಾಲನೆ
ಮೂಡುಬಿದಿರೆ: ಜನವರಿ 2 ರಿಂದ 6ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ನಡೆಯಲಿರುವ 80ನೇ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಫ್ಗೆ ಚಾಲನೆ ನೀಡಲಾಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿದ ಭಾರತ ಸರ್ಕಾರದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಮಾತನಾಡಿ, ಕ್ರೀಡೆಯು ಕೇವಲ ಪಠ್ಯೇತರ ಚಟುವಟಿಕೆಯಲ್ಲ ಬದಲಾಗಿ ಶಿಕ್ಷಣದ ಒಂದು ಭಾಗ. ಕ್ರೀಡೆಯನ್ನು ಪ್ರೋತ್ಸಾಹಿಸುವ ಮೂಲಕ ಸಂಸ್ಕೃತಿಯಾಗಿ ಬೆಳೆಸಬೇಕು. ಮುಂಬರುವ
ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮೂಡುಬಿದಿರೆ ಸಜ್ಜು
ಮೂಡುಬಿದಿರೆ: ಒಲಪಿಂಕ್ಸ್ನಂಥ ವಿಶ್ವಮಟ್ಟದ ವೇದಿಕೆಯಲ್ಲಿ ಭಾರತದ ಪತಾಕೆ ಹಾರಿಸುವ ರಾಷ್ರ್ಟದ ಭವಿಷ್ಯದ ಕ್ರೀಡಾಪಟುಗಳ ಸಾಧನೆಗೆ ಸಾಕ್ಷಿಯಾಗಲು ವಿದ್ಯಾಕಾಶಿ ಮೂಡುಬಿದಿರೆ ಸಜ್ಜುಗೊಂಡಿದೆ.
‘’ಹದಿಹರೆಯದ ವರ್ತನೆಗಳು’’ ವಿಶೇಷ ಉಪನ್ಯಾಸ
ವಿದ್ಯಾಗಿರಿ: ಆಕರ್ಷಣೆಯೆನ್ನುವುದು ಪ್ರತಿಯೊಬ್ಬ ವ್ಯಕ್ತಿಗೂ ಇರುವ ಸಹಜಗುಣ. ಆದರೆ ಅದನ್ನು ನಿಗ್ರಹಿಸಿಕೊಳ್ಳುವ ಸಾಮಥ್ರ್ಯವನ್ನು ಮಕ್ಕಳು ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ಕಾಲೇಜಿನ ಮಹಿಳಾ ಕ್ಷೇಮಪಾಲನಾಧಿಕಾರಿ ಡಾ.ಮಧುಮಾಲಾ ಕೆ. ತಿಳಿಸಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ “ಹದಿಹರೆಯದ ವರ್ತನೆಗಳು” ಎಂಬ ವಿಷಯದ ಕುರಿತು ವಿದ್ಯಾರ್ಥಿಯರನ್ನುದ್ದೇಶಿಸಿ ಮಾತನಾಡಿದರು. ಹದಿಹರೆಯದ ಸಮಯದಲ್ಲಿ ಮಕ್ಕಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಬದಲಾಗ ತೊಡಗುತ್ತಾರೆ. ದೇಹದಲ್ಲಾಗುವ ಶಾರೀರಿಕ ಬದಲಾವಣೆಗಳಿಗೆ ಮಕ್ಕಳು ಹೇಗೆ ವರ್ತಿಸಿ, ಎಚ್ಚರದಿಂದಿರಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿನಿಯರೊಂದಿಗೆ
ಆಳ್ವಾಸ್ನಲ್ಲಿ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟ
ಮೂಡುಬಿದಿರೆ: ಜನವರಿ 2 ರಿಂದ 6ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 80ನೇ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಫ್ ಅನ್ನು ಆಯೋಜಿಸಲಾಗಿದೆ.
ಸೂರ್ಯಗ್ರಹಣ ವೀಕ್ಷಣೆ
ಮೂಡುಬಿದಿರೆ: ಆಳ್ವಾಸ್ ಪದವಿ ಹಾಗೂ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದವತಿಯಿಂದ ಖಗೋಳ ಕೌತುಕದ ಕಂಕಣ ಸೂರ್ಯಗ್ರಹಣವನ್ನು ವೀಕ್ಷಿಸಲು ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಗುರುವಾರ ವ್ಯವಸ್ಥೆಯನ್ನು ಮಾಡಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಲವಾರು ದಶಕಗಳಿಗೊಮ್ಮೆ ನಡೆಯುವ ಬಾಹ್ಯಕಾಶದ ವಿಸ್ಮಯವನ್ನು ವೀಕ್ಷಿಸಿದರು. ಪ್ರೋಜೆಕ್ಟರ್ ಡಿಸ್ಪ್ಲೇಯ ಜತೆಯಲ್ಲಿ ಸೋಲಾರ್ ನೆಬ್ಯೂಲರ್ ಕನ್ನಡಕವನ್ನು ಧರಿಸಿ ವೀಕ್ಷಿಸಿದರು. ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕ ಡಾ.ಶಶಿಧರ್ ಭಟ್ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ನಡೆಯುವ ಪರಿಯನ್ನು ಹಂತ ಹಂತವಾಗಿ ವಿವರಿಸಿದರು. ಕಾಲೇಜಿನ ಪ್ರಾಚಾರ್ಯ ಡಾ
ಆಳ್ವಾಸ್ನ ಅಸೀಮಾ ದೋಲಾ ರಾಷ್ಟ್ರೀಯ ಯುವ ಸಮ್ಮೇಳನಕ್ಕೆ ಆಯ್ಕೆ
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಪ್ರಥಮ ಪತ್ರಿಕೋದ್ಯಮ ವಿದ್ಯಾರ್ಥಿನಿ ಅಸೀಮಾ ದೋಲಾ, ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿರುವ ನ್ಯಾಷನಲ್ ಯುತ್ ಕಾನ್ಫರೆನ್ಸ್ನಲ್ಲಿ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾರೆ. ಜನವರಿ 10ರಂದು ಮಂಗಳೂರಿನ ಲೋಯಲಾ ಹಾಲ್ನಲ್ಲಿ ಜರುಗಲಿರುವ ರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ‘’ಸ್ಕಿಲಿಂಗ್ ದಿ ಯಂಗ್ ಇಂಡಿಯಾ’’ ಎಂಬ ವಸ್ತು ವಿಷಯದೊಂದಿಗೆ ಸದೃಢ ದೇಶ ನಿರ್ಮಾಣದಲ್ಲಿ ಯುವಜನತೆಯ ಯೋಚನೆ ಹಾಗೂ ಯೋಜನೆಗಳ ವಿನಿಮಯಕ್ಕೆ ಅವಕಾಶ ನೀಡಲಾಗಿದೆ. ಆನ್ಲೈನ್ ಹಾಗೂ ದೂರವಾಣಿ ಸಂದರ್ಶನದ ಮೂಲಕ ಇವರ ವಿಷಯ ಮಂಡನೆ, ವಾಕ್ಚಾತುರ್ಯ
ರಾಜ್ಯಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಆಳ್ವಾಸ್ಗೆ ದ್ವಿತೀಯ ಸ್ಥಾನ
ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶ್ವೇತಾ ಎಸ್.ಜಿ., ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಫರ್ಧಾ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕ್ರೈಸ್ತ್ ಯುನಿವರ್ಸಿಟಿಯಲ್ಲಿ ಜರುಗಿದ ರಾಜ್ಯ ಮಟ್ಟದ ಈ ಸ್ಪರ್ಧೆಯಲ್ಲಿ ಸ್ಥಾನ ಪಡೆಯುದರೊಂದಿಗೆ ರೂ 9000 ನಗದು ಬಹುಮಾನಕ್ಕೂ ಭಾಜನರಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ
ಆಳ್ವಾಸ್ನಲ್ಲಿ ವಿಕಿಸೋರ್ಸ್ನ ತರಬೇತಿ ಶಿಬಿರ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನಲ್ಲಿ ವಿಕಿಪೀಡಿಯಾ ಅಸೋಸಿಯೇಷನ್ ಹಾಗೂ ಸೆಂಟರ್ ಫಾರ್ ಇಂಟರ್ನೆಟ್ ಆಂಡ್ ಸೊಸೈಟಿ (ಸಿಐಸ್), ಬೆಂಗಳೂರು ಇದರ ವತಿಯಿಂದ ಮೂರು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಸೆಂಟರ್ ಫಾರ್ ಇಂಟರ್ನೆಟ್ ಆಂಡ್ ಸೊಸೈಟಿಯ ಪ್ರೋಗ್ರಾಮ್ ಮ್ಯಾನೇಜರ್ ಟಿಟೊ ದೊತ್ತಾ ಮಾತನಾಡಿ, ಇಂದಿನ ಡಿಜಿಟಲೀಕರಣದ ಜಗತ್ತಿನಲ್ಲಿನ ಈ-ಪುಸ್ತಕದ ಬಳಕೆ ಹಾಗೂ ಇಲ್ಲಿನ ಹಲವಾರು ಸಮಸ್ಯೆಗಳ ಕುರಿತು ತಿಳಿಸಿದರು. ಜತೆಗೆ ವಿಕಿಸೊರ್ಸ್ ಇಂತಹ ಹಲವಾರು ಸಮಸ್ಯೆಗಳನ್ನು ಹೇಗೆ ನಿವಾರಿಸಿ ಓದುಗರಿಗೆ ಸಹಾಯ ಮಾಡುತ್ತದೆ ಎಂದು ಮಾಹಿತಿ
ಆಳ್ವಾಸ್ ಚಿಣ್ಣರಲ್ಲಿ ವಾರ್ಷಿಕೋತ್ಸವದ ಸಂಭ್ರಮ
ವಿದ್ಯಾಗಿರಿ: ಮಕ್ಕಳ ವಿದ್ಯಾಭ್ಯಾಸದ ತಳಹದಿ ಭದ್ರವಾಗಿದ್ದರೆ ಮಾತ್ರ ಅವರ ಉನ್ನತ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಆಳ್ವಾಸ್ ವಿದ್ಯಾಸಂಸ್ಥೆಯ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಅಭಿಪ್ರಾಯಪಟ್ಟರು. ಆಳ್ವಾಸ್ ಕಿಂಡರ್ಗಾರ್ಡನ್, ಇಂಗ್ಲಿಷ್ ಮಾಧ್ಯಮದ ಪ್ರಾಥಮಿಕ ಮತ್ತು ಕೇಂದ್ರ ಶಾಲೆಯ ವಾರ್ಷಿಕೋತ್ಸವವನ್ನು ಆಳ್ವಾಸ್ ಕಾಲೇಜಿನ ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಒಬ್ಬ ವ್ಯಕ್ತಿ ಉತ್ತಮವಾಗಿ ಬೆಳೆಯಬೇಕೆಂದರೆ ಆತನಿಗೆ ಒಳ್ಳೆಯ ಪ್ರಾರಂಭ ಸಿಗಬೇಕು ಆಗ ಮಾತ್ರ ಆತ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ. ಪ್ರಾಥಮಿಕ ವಿದ್ಯಾಭ್ಯಾಸಲ್ಲಿರುವ
ಆಳ್ವಾಸ್ ಕಾಲೇಜಿಗೆ 25 ರ್ಯಾಂಕ್
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ 2019ರ ಸಾಲಿನಲ್ಲಿ ನಡೆಸಿದ್ದ ಪದವಿ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಂಡಿದ್ದು, ಮೂಡುಬಿದಿರೆ ಆಳ್ವಾಸ್ ಕಾಲೇಜು ಒಟ್ಟು 25 ರ್ಯಾಂಕ್ ಗಳಿಸಿ ಮಂಗಳೂರು ವಿಶ್ವವಿದ್ಯಾಲಯದಲ್ಲೇ ಅತೀ ಹೆಚ್ಚು ರ್ಯಾಂಕ್ ಗಳಿಸಿದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ. ಒಟ್ಟು 25 ರ್ಯಾಂಕ್ಗಳಲ್ಲಿ 7 ಪ್ರಥಮ, 6 ದ್ವಿತೀಯ, 6 ತೃತೀಯ, ನಾಲ್ಕನೇ ರ್ಯಾಂಕ್ 1, ಆರನೇ ರ್ಯಾಂಕ್ 1, ಏಳನೇ ರ್ಯಾಂಕ್ 1, ಒಂಬತ್ತನೇ ರ್ಯಾಂಕ್ 1 ಹಾಗೂ ಹತ್ತನೇ ರ್ಯಾಂಕ್ 2 ಗಳಿಸಿದೆ. ಬಿಕಾಂನ