News & Events
ಸಿಇಟಿ ಫಲಿತಾಂಶ : ಆಳ್ವಾಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಮೂಡುಬಿದಿರೆ: 2019ರಲ್ಲಿ ಸಿಇಟಿ ಪರೀಕ್ಷೆಗೆ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಾಜರಾಗಿದ್ದು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಆಳ್ವಾಸ್ ದರ್ಶನ್ ಸಮರ್ಥ ಬಿ.ಎಸ್ ಅಗ್ರಿಕಲ್ಚರ್‍ನಲ್ಲಿ 10ನೇ ರ್ಯಾಂಕ್ ಪಡೆಯುವುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಒಂದು ಸಾವಿರ ರ್ಯಾಂಕ್ ಒಳಗಡೆ 678 ರ್ಯಾಂಕ್ ಆಳ್ವಾಸ್ ಪಡೆದುಕೊಂಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಿಇಟಿ ಪರೀಕ್ಷೆಯ ಒಂದರಿಂದ ಐವತ್ತು ರ್ಯಾಂಕ್ ಒಳಗಡೆ 20 ರ್ಯಾಂಕ್‍ಗಳನ್ನು ಆಳ್ವಾಸ್‍ನ ವಿದ್ಯಾರ್ಥಿಗಳು ಪಡೆದಿದ್ದಾರೆ. ನೂರರ ಒಳಗಡೆ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ
ಮೂಡುಬಿದಿರೆ: ವಿದ್ಯಾರ್ಥಿ ಜೀವನ ಮುಗಿದ ಕ್ಷಣ ಇದು ಜೀವನದ ಹೊಸ ಆರಂಭದ ಸೂಚನೆ. ಕಲಿತ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು. ಅಭಿವೃದ್ದಿಯ ಹೆಸರಿನಲ್ಲಿ ಇವತ್ತು ನಾವೆಲ್ಲ ಅದರ ಪರಿಕಲ್ಪನೆಯನ್ನು ಅರಿಯದೆ ಅಂದರಾಗಿದ್ದೇವೆ. ವಿಪರೀತ ಪ್ಲಾಸ್ಟಿಕ್ ಬಳಕೆ, ಪರಿಸರನಾಶ, ನದಿಗಳ ಮಲೀನ ಇವುಗಳ ಬಗ್ಗೆ ಜಾಗೃತರಾಗಬೇಕಿದೆ ಎಂದು ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಅಧ್ಯಕ್ಷ, ಆಡಳಿತ ನಿರ್ದೇಶಕ ಆಲೈನ್ ಸಿ.ಪಿರೇರಾ ಹೇಳಿದರು. ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ
ಸಿಇಟಿ: ಆಳ್ವಾಸ್‍ನ ದರ್ಶನ್‍ಗೆ 10ನೇ RANK
ಮೂಡುಬಿದಿರೆ: ಸಿಇಟಿ ಫಲಿತಾಂಶದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎಸ್. ದರ್ಶನ್ ಸಮರ್ಥ ಅವರು ಬಿಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ 10ನೇ ರ್ಯಾಂಕ್ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಮೂಲತಃ ಮೈಸೂರಿನ ಹೂಟಗಳ್ಳಿಯವರಾದ ದರ್ಶನ್ ಬಿ.ಎನ್.ವೈಎಸ್. ವಿಭಾಗದಲ್ಲಿ 43ನೇ ರ್ಯಾಂಕ್ ಪಶುವೈದ್ಯಕೀಯ ವಿಜ್ಞಾನ ವಿಭಾಗದಲ್ಲಿ 71 ನೇ ರ್ಯಾಂಕ್, ಎಂಜಿನಿಯರಿಂಗ್ ವಿಭಾಗದಲ್ಲಿ 119ನೇ ರ್ಯಾಂಕ್, ಬಿಫಾರ್ಮಾ ಮತ್ತು ಡಿಫಾರ್ಮಾ ವಿಭಾಗದಲ್ಲಿ 134ನೇ ರ್ಯಾಂಕ್ ಗಳಿಸಿದ್ದಾರೆ. ಇವರು ಪ್ರೌಢಶಾಲಾ ಶಿಕ್ಷಕ ಎಸ್.ಡಿ.ಶಿವಣ್ಣ ,ಗೃಹಿಣಿ ಜಲಜಾಕ್ಷಿಯವರ ಪುತ್ರ. ಕಳೆದ ಪಿಯುಸಿ
ಮರು ಮೌಲ್ಯಮಾಪನ: ಆಳ್ವಾಸ್‍ನ ಸುಜ್ಞಾನ್ ಆರ್. ಶೆಟ್ಟಿ ರಾಜ್ಯಕ್ಕೆ ಪ್ರಥಮ
ಮೂಡುಬಿದಿರೆ: ಎಸ್‍ಎಸ್‍ಎಲ್‍ಸಿ ಮರು ಮೌಲ್ಯಮಾಪನದಲ್ಲಿ ಆಳ್ವಾಸ್‍ನ ಸುಜ್ಞಾನ್ ಆರ್.ಶೆಟ್ಟಿ ಅವರು 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ ಅದರಲ್ಲಿ ಆಳ್ವಾಸ್‍ನ ಸುಜ್ಞಾನ್ ಆರ್.ಶೆಟ್ಟಿ ಕನ್ನಡ ಮತ್ತು ಇಂಗ್ಲೀಷ್ ವಿಷಯಗಳಲ್ಲಿ ತಲಾ ಒಂದೊಂದು ಅಂಕ ಕಡಿಮೆ ಬಂದಿತ್ತು. ಒಟ್ಟು 623 ಅಂಕಗಳನ್ನು ಗಳಿಸಿ 2ನೇ ರ್ಯಾಂಕನ್ನು ಪಡೆದುಕೊಂಡಿದ್ದರು. ತಾನು ಎಲ್ಲಾ ಪ್ರಶ್ನೆಗಳಿಗೂ ಸರಿಯಾದ ಉತ್ತರವನ್ನು ನೀಡಿದ್ದೇನೆ ತನಗೆ
ವಿ.ಟಿ.ಯು ಆಂತರ್ ವಲಯ ಖೋ ಖೋ: ಆಳ್ವಾಸ್ ಮಹಿಳಾ ತಂಡಕ್ಕೆ ಪ್ರಶಸ್ತಿ
ಮೂಡುಬಿದಿರೆ: ವಿ.ಟಿ.ಯು ಅಂತರ್ ವಲಯದ ಖೋ-ಖೋ ಚಾಂಪಿಯನ್ ಶಿಪ್ ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ವಿಭಾಗ ಪ್ರಥಮ ಸ್ಥಾನ ಪಡೆಯಿತು. ತುಮಕೂರು ಗುಬ್ಬಿಯ ಚನ್ನಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಚಾಂಪಿಯನ್ ಶಿಪ್‍ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ತಂಡವು ಬಿ.ಎಮ್. ಸ್ ಇಂಜಿನಿಯರಿಂಗ್ ಕಾಲೇಜು ಬೆಂಗಳೂರು ತಂಡವನ್ನು ಸೋಲಿಸುವುದರ ಮೂಲಕ ಚಾಂಪಿಯನ್‍ಶಿಪ್ ಪ್ರಶಸ್ತಿಯನ್ನು ಪಡೆಯಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷ ಡಾ. ಎಂ ಮೋಹನ ಆಳ್ವ, ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದರು.
ಆಳ್ವಾಸ್‍ನಲ್ಲಿ `ದಕ್ಷ’-ಕಿರಿಯ ವೈದ್ಯರ ವೃತ್ತಿ ಕೌಶಲ್ಯಾಭಿವೃದ್ದಿ ಕಾರ್ಯಕ್ರಮ
ಮೂಡುಬಿದಿರೆ: ನಿರಂತರ ಅಧ್ಯಯನ, ಕೌಶಲ್ಯ ಹಾಗೂ ಪರಿಶ್ರಮದಿಂದ ವೈದ್ಯಕೀಯ ವೃತ್ತಿಯಲ್ಲಿ ಯಶಸ್ಸು ಕಾಣಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ ಎಂ. ಆಳ್ವ ತಿಳಿಸಿದರು. ಆಳ್ವಾಸ್ ಆಯುರ್ವೇದ ಕಾಲೇಜು ವಿದ್ಯಾಗಿರಿ ಮೂಡಬಿದಿರೆ ಹಮ್ಮಿಕೊಂಡ ಕಾರ್ಯಕ್ರಮ `ದಕ್ಷ’ ಪ್ರಸಕ್ತ ಸಾಲಿನ ಕಿರಿಯ ವೈದ್ಯರ ವೃತ್ತಿ ಕೌಶಲ್ಯಾಭಿವೃದ್ದಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗ ಕಾಲೇಜಿನ ಪಾಂಶುಪಾಲರಾದ ಡಾ. ವನಿತಾ ಶೆಟ್ಟಿ , ಆಳ್ವಾಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಹನಾ
ಆಳ್ವಾಸ್‍ನಲ್ಲಿ ಹೋಮಿಯೋಪಥಿ ರಾಷ್ಟ್ರೀಯ ಸಮಾವೇಶ
ಮೂಡುಬಿದಿರೆ: ವೈದ್ಯಕೀಯ ಕ್ಷೇತ್ರದ ಯಾವುದೇ ವಿಭಾಗದಲ್ಲಿ ನೀವು ಆಸಕ್ತರಾಗಿದ್ದು, ನಂಬಿಕೆ ಹಾಗೂ ಶ್ರದ್ಧೆಯಿಂದ ವ್ಯಾಸಂಗ ಮಾಡಿದಲ್ಲಿ ವೃತ್ತಿ ಜೀವನದಲ್ಲಿ ತೃಪ್ತಿ, ಯಶಸ್ಸು ಸಿಗುತ್ತದೆ. ಹಿಂದೆ ಹೊಮಿಯೋಪಥಿ ಸೇರಲು ಹಿಂದೇಟು ಹಾಕುವ ಪರಿಸ್ಥಿತಿಯಿತ್ತು. ಆದರೆ ಈಗ ಹೋಮಿಯೋಪಥಿಗೆ ಆಧ್ಯತೆ ನೀಡಿ ಆಯ್ಕೆ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆ. ಹೊಮಿಯೋಪಥಿ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಯಾಗಬೇಕು. ಸಂಶೋಧನೆಯಿಂದಾಗಿ ಕ್ಷೇತ್ರದಲ್ಲಿ ಅಪನಂಬಿಕೆಗಳು ದೂರವಾಗುತ್ತದೆ. ವಿದ್ಯಾರ್ಥಿಗಳು ಹೊಮಿಯೋಪಥಿ ಸಂಶೋಧನೆಗೆ ಹೆಚ್ಚಿನ ಗಮನವಹಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಹೋಮಿಯೋಪಥಿ
ಮಹಿಳಾ ಕಬ್ಬಡಿ ಚಾಂಪಿಯಶಿಪ್: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ವಿಭಾಗಕ್ಕೆ ಪ್ರಶಸ್ತಿ
ಮೂಡುಬಿದಿರೆ: ವಿ.ಎಸ್.ಮ್.ಎಸ್.ಅರ್.ಕೆ.ಐ.ಟಿ. ನಿಪ್ಪಾಣಿಯಲ್ಲಿ ನಡೆದ ವಿ.ಟಿ.ಯು. ಇಂಟರ್ ಝೋನ್ ಮಹಿಳಾ ಕಬ್ಬಡಿ ಚಾಂಪಿಯಶಿಪ್‍ನಲ್ಲಿ ಆಳ್ವಾಸ್ ಇಂಜಿನಿಯರಿಂಗ್‍ನ ಮಹಿಳಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ನಲ್ಲಿ ಎಸ್.ಜೆ.ಸಿ.ಐ.ಟಿ ಚಿಕ್ಕಬಳ್ಳಾಪುರವನ್ನು ಮಣಿಸುವುದರ ಮೂಲಕ ಚಾಂಪಿಯನ್ ಪಟ್ಟ ತನ್ನಾದಾಗಿಸಿಕೊಂಡಿತು. ವಿಜೇತರನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದರು.
ಮೇ.19ರಂದು ಆಳ್ವಾಸ್‍ನಲ್ಲಿ ಹೋಮಿಯೋಪಥಿ ರಾಷ್ಟ್ರೀಯ ಸಮಾವೇಶ
ಮೂಡುಬಿದಿರೆ: ಕಳೆದ 15 ವರ್ಷಗಳಿಂದ ಹೋಮಿಯೋಪಥಿ ವೈದ್ಯ ಕ್ಷೇತ್ರದಲ್ಲಿ ಗುಣಮಟ್ಟದ ತರಬೇತಿ ಮತ್ತು ಚಿಕಿತ್ಸೆಯನ್ನು ನೀಡುತ್ತಿರುವ ಆಳ್ವಾಸ್ ಹೋಮಿಯೋಪಥಿ ಕಾಲೇಜು ಮತ್ತು ಭಾರತೀಯ ಹೋಮಿಯೋಪಥಿ ವೈದ್ಯ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಭವನದಲ್ಲಿ ಮೇ.19ರಂದು ರಾಷ್ಟ್ರೀಯ ಸಮಾವೇಶವು ನಡೆಯಲಿದೆ ಎಂದು ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್‍ರಾಜ್ ಪಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹೋಮಿಯೋಪಥಿಯ ಶ್ರೇಷ್ಠತೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ, ಹೋಮಿಯೋಪಥಿ ವೈದ್ಯ ವಿಜ್ಞಾನದ ಹೊಸ ಮಜಲುಗಳನ್ನು ಅನ್ವೇಷಿಸುವ ನಿರಂತರ ಪ್ರಯತ್ನಗಳು ಆಳ್ವಾಸ್‍ನಲ್ಲಿ ನಡೆಯುತ್ತಿದೆ. ಇದೀಗ ದೀರ್ಘಕಾಲೀನ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಂಜಾನ್ ವೃತ ಆಚರಣೆ
ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಂಜಾನ್ ಮೊದಲ ದಿನದ ಆಚಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಗಮಿಸಿದ ಉದ್ಯಮಿ ಅಬುಲಾಲ್ ಪುತ್ತಿಗೆ ಆಳ್ವಾಸ್ ಕಾಲೇಜಿನಲ್ಲಿ ಸರ್ವ ಧರ್ಮವನ್ನು ಗೌರವಿಸುವ ಸಂಸ್ಥೆ ಅದ್ದರಿಂದ ಇಲ್ಲಿನ ವಿದ್ಯಾರ್ಥಿಗಳು ಪುಣ್ಯವಂತರು. ನಾವೆಲ್ಲರು ಸಮಾಜದಲ್ಲಿ ಬೆರೆತು ಬಾಳುವುದರ ಜೊತೆಗೆ ಸಮಾಜದ ಉನ್ನತಿಗೆ ಶ್ರಮಿಸಬೇಕು. ಎಲ್ಲರನ್ನು ಗೌರವಿಸಿ, ಎಲ್ಲ ಧರ್ಮವನ್ನು ಗೌರವಿಸುವ ಪ್ರಜೆಗಳಾಬೇಕೆಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟೀ ವಿವೇಕ್ ಆಳ್ವ, ಉದ್ಯಮಿ ಮುಸ್ತಾಪ, ಇಂಜಿನಿಯರ್ ಮೊಹಮ್ಮದ್ ಶರೀಫ್, ಸಿ.ಎಚ್.