ಆಳ್ವಾಸ್‍ನಲ್ಲಿ ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್’ ಆರಂಭ

ವಿದ್ಯಾಗಿರಿ: ಜಗತ್ತಿನಲ್ಲಿ ಪ್ರತಿಯೊಬ್ಬರೂ ಹುಟ್ಟಿನಿಂದಲೇ ಗ್ರಾಹಕರು. ಆದ್ದರಿಂದ ಯಾವುದೇ ವಸ್ತು ಅಥವಾ ಸೇವೆಯನ್ನು ಪಡೆಯುವ ಮುನ್ನ ಸೂಕ್ಮವಾಗಿ ಪರಿಶೀಲಿಸಬೇಕು. ಗ್ರಾಹಕರ ಹಕ್ಕು ಮತ್ತು ಬಾಧ್ಯತೆಗಳನ್ನು ಅರಿತುಕೊಂಡು ವ್ಯವಹರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಒಕ್ಕೂಟದ ಅಧ್ಯಕ್ಷರಾದ ಎಮ್.ಜೆ ಸಾಲಿಯಾನ್ ಹೇಳಿದರು.

ಅವರು ಆಳ್ವಾಸ್ ಕಾಲೇಜಿನ ಪದವಿ ಅರ್ಥಶಾಸ್ತ್ರ ಹಾಗೂ ವಾಣಿಜ್ಯ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್’ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಿಗೂ ಪ್ರಾಧಾನ್ಯತೆ ನೀಡಬೇಕಾಗುತ್ತದೆ. ಅವುಗಳಲ್ಲೊಂದಾದ ಗ್ರಾಹಕ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಅತಿ ಕಡಿಮೆ. ಈ ನಿಟ್ಟಿನಲ್ಲಿ ಗ್ರಾಹಕ ಶಿಕ್ಷಣ ಜನಸಾಮಾನ್ಯರಿಗೆ ತಲುಪುವಂತೆ ಮಾಡಲು ಪ್ರಯತ್ನಿಸುವುದು ಈ ಕಾಲದ ಬೇಡಿಕೆಯಾಗಿದೆ. ಆ ಹಿನ್ನಲೆಯಲ್ಲಿ ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್, ಗ್ರಾಹಕರ ಶಿಕ್ಷಣದ ಜೊತೆಗೆ ಜೀವನ ಮೌಲ್ಯ, ಸಮಯದ ಸದುಪಯೋಗ, ಶಿಸ್ತುನ್ನು ತಿಳಿಸುತ್ತದೆ ಎಂದರು.
ಇದೇ ಸಂಧರ್ಭದಲ್ಲಿ ಆಳ್ವಾಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಒಕ್ಕೂಟದ ಅಧ್ಯಕ್ಷರ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು.
ಆಳ್ವಾಸ್ ಕಾಲೇಜಿನ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಸಿಗುವ ಅವಕಾಶವನ್ನು ಬಳಸಿಕೊಂಡಷ್ಟು ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ. ಇಂದಿನ ಶಿಕ್ಷಣ ಕೇವಲ ಸರ್ಟಿಫಿಕೇಟ್‍ನಿಂದ ಪೂರ್ಣಗೊಳ್ಳದೆ, ವಿದ್ಯಾರ್ಥಿಗಳಲ್ಲಿ ಉದ್ಯೋಗ ಮಾರುಕಟ್ಟೆಯ ಕೌಶಲ್ಯ ಹಾಗೂ ಜೀವನ ಕೌಶಲ್ಯದ ನೈಪುಣ್ಯತೆಯನ್ನು ನಿರೀಕ್ಷಿಸುತ್ತದೆ. ಆದ್ದರಿಂದ ಇಂತಹ ವೇದಿಕೆಯನ್ನು ಬಳಸಿಕೊಂಡು ತಮ್ಮನ್ನು ಎಲ್ಲಾ ಹಂತದಲ್ಲೂ ಪರಿಪೂರ್ಣರಾಗುವಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಪ್ರೋ. ಬಾ¯ಕೃಷ್ಣ ಶೆಟ್ಟಿ, ಕಲಾ ನಿಖಾಯದ ಡೀನ್ ಸಂಧ್ಯಾ ಕೆ ಎಸ್ ಹಾಗೂ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಹರಿಣಾಕ್ಷಿ ಉಪಸ್ಥಿತರಿದ್ದರು.
ಕಾರ್ಯಕ್ರಮನ್ನು ಪತ್ರಿಕೋದ್ಯಮ ವಿದ್ಯಾರ್ಥಿ ಗುಣೇಶ್ ಭಾರತೀಯ ನಿರೂಪಿಸಿ, ಚೈತ್ರ ವಂದಿಸಿದರು.

Highslide for Wordpress Plugin