ಆಳ್ವಾಸ್ ಕಾಲೇಜಿನಲ್ಲಿ ನೂತನ ಒಡಂಬಡಿಕೆಗೆ ಸಹಿ

ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಹಾಗೂ ಪದವಿ ಕಾಲೇಜಿನ ಕಾಮರ್ಸ್ ಪ್ರೊಫೆಶನಲ್ ವಿಭಾಗಗಳ ನಡುವೆ ನೂತನ ಒಡಂಬಡಿಕೆಗೆ ಸಹಿ ಹಾಕಲಾಯಿತು. ಒಡಂಬಡಿಕೆಯ ಮೂಲ ಉದ್ದೇಶ ಶೈಕ್ಷಣಿಕ ವಿನಿಮಯವಾಗಿದ್ದು, ಇದು ವಿದ್ಯಾರ್ಥಿಗಳ ವೃತ್ತಿ ಜೀವನ ಹಾಗೂ ಕೌಶಲ್ಯಗಳ ಬೆಳವಣಿಗೆ ಸಹಕಾರಿಯಾಗಲಿದೆ.

ಒಡಂಬಡಿಕೆಯ ಪ್ರಕಾರ ಕಾಮರ್ಸ್ ವಿದ್ಯಾರ್ಥಿಗಳಿಗೆ ಅಲ್ಪಾವಧಿ ಪತ್ರಿಕೋದ್ಯಮ ಸಂಬಂಧಿತ ಸರ್ಟಿಫಿಕೇಟ್ ಕೋರ್ಸ್‍ಗಳನ್ನು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೇಸಿಕ್ ಅಕೌಟಿಂಗ್‍ನಂತಹ ವಾಣಿಜ್ಯ ಸಂಬಂಧಿತ ಕೋರ್ಸ್‍ಗಳನ್ನು ನೀಡಲಾಗುತ್ತದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ, ನಿರೂಪಣೆ, ಡಿಜಿಟಲ್ ಮಾರ್ಕೆಟಿಂಗ್‍ಳಂತಹ ವಾರಾಂತ್ಯ ತರಗತಿಗಳನ್ನು ನಡೆಸಲಾಗುತ್ತದೆ. ಶಿಕ್ಷಕರ ವಿನಿಮಯದೊಂದಿಗೆ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗುತ್ತದೆ.

ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಶ್ರೀನಿವಾಸ ಪೆಜತ್ತಾಯ ಹಾಗೂ ಕಾಮರ್ಸ್ ಪ್ರೊಫೆಶನಲ್ ವಿಭಾಗದ ಸಂಯೋಜಕ ಅಶೋಕ್ ಕೆ ಜಿ, ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ಡೀನ್ ಸುರೇಖಾ ರಾವ್ ಅವರ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಲಾಯಿತು. ವಾಣಿಜ್ಯ ಹಾಗೂ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Highslide for Wordpress Plugin