ಒರಿಯೆಂಟೇಶನ್ ಕಾರ್ಯಕ್ರಮ

ಮಿಜಾರು: ಆಳ್ವಾಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳಿಗೆ ಒರಿಯೆಂಟೇಶನ್ ಕಾರ್ಯಕ್ರಮವನ್ನು ಗುರುವಾರ ಎ.ಐ.ಇ.ಟಿ.ಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕಾಂiÀರ್iಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ.ಬಾಲವೀರರೆಡ್ಡಿ “ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಂಪೂರ್ಣ ಅವಕಾಶ ನೀಡುತ್ತಿದೆ. ಇಲ್ಲಿ ವಿದ್ಯಾರ್ಥಿಗಳ ಏಳಿಗೆಗೆ ಬೇಕಾದಂತಹ ಸುಸಜ್ಜಿತ ಪ್ರಯೋಗಾಲಯಗಳು, ಗ್ರಂಥಾಲಯ, ಸಂಶೋಧನಾಕೇಂದ್ರ, ಇಂಟರ್‍ನೆಟ್ ಸೌಲಭ್ಯ ಇದೆ. ಇದನ್ನು ಸದುಪಯೋಗಪಡಿಸಿ ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು. ನಾಲ್ಕು ವರ್ಷಗಳ ಕಾಲ ಕಠಿಣ ಪರಿಶ್ರಮ ಮಾಡಿದರೆ ನಂತರದಲ್ಲಿ ಜೀವನ ಸುಗಮವಾಗಿರುತ್ತದೆ. ಇಲ್ಲದೇ ಹೋದಲ್ಲಿ ಜೀವನಪೂರ್ತಿ ಕಷ್ಟಪಡಬೇಕಾಗುತ್ತದೆ. ಮಕ್ಕಳು ತಮ್ಮ ಸಾಮಥ್ರ್ಯ, ದುರ್ಬಲತೆಗಳನ್ನು ಅರಿತು, ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು, ಅಡೆತಡೆಗಳನ್ನು ಮೀರಿ ಮುಂದೆ ಸಾಗಬೇಕು. ಅಲ್ಲದೆ ವಿವಿಧ ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು” ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿ ಅದಾನಿ ಗ್ರೂಪ್ ಆಫ್ ಇಂಡಸ್ಟ್ರೀಸ್‍ನ ಕಾರ್ಯನಿರ್ವಾಹಕ ಅಧಿಕಾರಿ ಕಿಶೋರ್ ಆಳ್ವ ಮಾತನಾಡಿ “ ಆಳ್ವಾಸ್ ಕಾಲೇಜು ಅತ್ಯುತ್ತಮ, ವೃತ್ತಿಪರ ಹಾಗೂ ಸ್ಪರ್ಧಾತ್ಮಕ ಇಂಜಿನಿಯರ್‍ಗಳನ್ನು ಸಮಾಜಕ್ಕೆ ನೀಡುತ್ತಿದೆ. ತಂತ್ರಜ್ಞಾನ, ಸುಸ್ಥಿರತೆ, ಮೌಲ್ಯಯುತ ಅಭಿವೃದ್ಧಿಇಂದು ಅತೀ ಅವಶ್ಯಕ. ಇದರೊಂದಿಗೆ ವಿದ್ಯಾರ್ಥಿಗಳು ನಾಯಕತ್ವ, ಹೊಣೆಗಾರಿಕೆ, ಸದಾಚಾರ, ದೃಢನಿರ್ಧಾರ ಮುಂತಾದ ಗುಣಗಳನ್ನು ಬೆಳೆಸಿಕೊಳ್ಳಬೇಕು” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮಾತನಾಡಿ, ‘ಪದವಿ ಶಿಕ್ಷಣ ವಿದ್ಯಾರ್ಥಿಯ ಮುಂದಿನ ಜೀವನಕ್ಕೆ ಬೇಕಾದ ನಿರ್ಧಾರಗಳನ್ನು ಬಲಪಡಿಸುವ ಪ್ರಮುಖಘಟ್ಟ. ಪದವಿ ಪಡೆದುಕೊಂಡ ಬಳಿಕ ವಿದ್ಯಾರ್ಥಿಗಳು ಉದ್ಯೋಗ, ಸಂಶೋಧನೆ, ಸ್ನಾತಕೋತ್ತರ ಪದವಿ ಅಥವಾ ಸ್ವಂತ ಉದ್ದಿಮೆಯಲ್ಲಿ ನಿರತರಾಗುತ್ತಾರೆ. ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ಧತೆ ಹಾಗೂ ತರಬೇತಿಯನ್ನು ಆಳ್ವಾಸ್ ಕಾಲೇಜಿನಲ್ಲಿ ಒದಗಿಸಿಕೊಡಲಾಗುವುದು. ವಿದ್ಯಾರ್ಥಿಗಳು ಜವಾಬ್ದಾರಿಯುತರಾಗಿ, ಧೃತಿಗೆಡದೆ, ಛಲವಂತರಾಗಿ ಪರಿಶ್ರಮಪಡಬೇಕು ಹಾಗೂ ಸಮಾಜಕ್ಕೆ ಕೊಡುಗೆ ನೀಡುವ ಸಂಪನ್ಮೂಲ ವ್ಯಕ್ತಿಗಳಾಗಬೇಕು’ ಎಂದರು.
ಕಾರ್ಯಕ್ರಮದಲ್ಲಿ ಡಾ.ಬಾಲವೀರರೆಡ್ಡಿ ಹಾಗೂ ಕಿಶೋರ್ ಆಳ್ವರವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಎ.ಐ.ಇ.ಟಿ.ಯ ವಿವಿಧ ವಿಭಾಗಗಳ ಡೀನ್ ಹಾಗೂ ಮುಖ್ಯಸ್ಥರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಡಾ. ಹರೀಶ್ ಆನಂದ್ ಸ್ವಾಗತಿಸಿದರು. ಭಾರ್ಗವಿ ಪ್ರಾರ್ಥಸಿ ಹಾಗೂ ಡಾ.ಬಸವರಾಜ್ ವಂದಿಸಿದರು. ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

Highslide for Wordpress Plugin