ಮೂಡುಬಿದಿರೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜರಿಗೆ ಆಳ್ವಾಸ್ ಸಂಸ್ಥೆಯಿಂದ 2ಲಕ್ಷ ರೂ ಪ್ರೋತ್ಸಾಹಧನ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಘೋಷಿಸಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದತ್ತು ಯೋಜನೆಯಡಿ ಉಚಿತ ಶಿಕ್ಷಣ ನೀಡುವುದಲ್ಲದೆ ಅತ್ಯತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುತ್ತಾ ಬಂದಿದೆ. ಈ ಹಿಂದೆಯೂ ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಂಸ್ಥೆಯ ಹಳೆ ವಿದ್ಯಾರ್ಥಿಗಳಿಗೆ, ರ್ಯಾಂಕ್ ವಿಜೇತರಿಗೆ ಹಾಗೂ ಕ್ರೀಡಾರಂಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೂ ಪ್ರೋತ್ಸಾಹಧನ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.