`ನ್ಯೂ ಮೀಡಿಯಾ’ ಕಾರ್ಯಾಗಾರ

ಮೂಡಬಿದಿರೆ: ನಮ್ಮ ಆಲೋಚನೆಗಳನ್ನು ಎಂದಿಗೂ ಯಾವುದೋ ಒಂದು ಚೌಕಟ್ಟಿಗೆ ಸೀಮಿತಗೊಳಿಸಬಾರದು. ನಮ್ಮ ಗುರಿಯನ್ನು ತಲುಪವವರೆಗೂ ವಿವಿಧ ಆಯಾಮಗಳಲ್ಲಿ ಪ್ರಯತ್ನಿಸಬೇಕು ಎಂದು ಬೆಂಗಳೂರಿನ ಇನ್‍ಡೂಡಲ್ ಮೀಡಿಯಾದ ಸುದೀಪ್ ಶೆಣೈ ಹೇಳಿದರು.
ಆಳ್ವಾಸ್ ಕಾಲೇಜಿನ ಸ್ನಾತಕೋತರ ಪ್ರತಿಕೋದ್ಯಮ ವಿಭಾಗದಲ್ಲಿ ಆಯೋಜಿಸಿದ್ದ `ನ್ಯೂ ಮೀಡಿಯಾ’ ಕಾರ್ಯಾಗಾರದಲ್ಲಿ ಇವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೇ ವಿಭಿನ್ನವಾದ ಕೌಶಲ್ಯವನ್ನು ಬೆಳೆಸಿಕೊಂಡು ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಗಾರದಲ್ಲಿ ನ್ಯೂ ಮೀಡಿಯಾದಲ್ಲಿರುವ ಅವಕಾಶಗಳ ಬಗ್ಗೆ ತಿಳಿಸುತ್ತಾ, ಸಾಮಾಜಿಕ ಜಾಲತಾಣದ ನಿರ್ವಹಣೆ, ಜಾಹಿರಾತು ಸಂಸ್ಥೆ, ಬ್ಲಾಗ್, ವೆಬ್‍ಸೈಟ್, ಸಂದರ್ಶನ ಮತ್ತು ಕಂಟೆಂಟ್ ರೈಟಿಂಗ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಗಾರದಲ್ಲಿ ಪದವಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಮತ್ತು ಸ್ನಾತಕೋತರ ಪತ್ರಿಕೋದ್ಯಮದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಗಾರದಲ್ಲಿ ಸ್ನಾತಕೋತರ ವಿಭಾಗದ ಮುಖ್ಯಸ್ಥೆ ಡಾ.ಮೌಲ್ಯಜೀವನ್‍ರಾಮ್, ಉಪನ್ಯಾಸಕ ಡಾ.ಶ್ರೀನಿವಾಸ ಹೊಡೆಯಾಲ, ಉಪನ್ಯಾಸಕಿ ಶ್ರೀಗೌರಿ ಜೋಶಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೇವಿಶ್ರೀ ಶೆಟ್ಟಿ ಸ್ವಾಗತಿಸಿ, ಪ್ರಸಾದ್ ಶೆಟ್ಟಿ ವಂದಿಸಿದರು.

Highslide for Wordpress Plugin