ಪ.ಪೂ. ಕಾಲೇಜುಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಆಳ್ವಾಸ್ ಪ.ಪೂ. ಕಾಲೇಜಿಗೆ 59 ಪದಕ

ಮೂಡುಬಿದಿರೆ : ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್ ಎಡಪದವು ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15ರಂದು ನಡೆದ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜು ಒಟ್ಟು 27ಚಿನ್ನ, 21 ಬೆಳ್ಳಿ ಮತ್ತು 11 ಕಂಚಿನ ಪದಕಗಳೊಂದಿಗೆ 59 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 100 ಅಂಕ ಹಾಗೂ ಬಾಲಕಿಯರ ವಿಭಾಗದಲ್ಲಿ 123 ಅಂಕ ಪಡೆದು ಒಟ್ಟು 223 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆಯಿತು.
ಬಾಲಕರ ವಿಭಾಗದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ನಾಗೇಂದ್ರ ಅಣ್ಣಪ್ಪ, ವiಹಾಂತೇಶ್. ಸತೀಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ಆಲೋಸಿಯಸ್ ವರ್ಷ, ನಿಶಲ್‍ಡೋಲ್‍ಫೀನ್ ಡೀಸೋಜ ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು.

Highslide for Wordpress Plugin