ಮಾನವಿಕ ವಿಭಾಗದ ಶಿಕ್ಷಕ ಪಾಲಕ ಸಭೆ

ವಿದ್ಯಾಗಿರಿ: ಶೈಕ್ಷಣಿಕ ಜೀವನವು ವಿದ್ಯಾರ್ಥಿ, ಹೆತ್ತವರು ಮತ್ತು ಶಿಕ್ಷಕ ಹೀಗೆ ಮೂರು ಬಿಂದುಗಳ ಸಮನ್ವಯತೆಯ ಪ್ರತಿಬಿಂಬ. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಶಿಕ್ಷಕ ಹಾಗೂ ಪಾಲಕರ ಜವಬ್ದಾರಿ ಪ್ರಮುಖವಾಗಿರುತ್ತದೆ ಎಂದು ಆಳ್ವಾಸ್ ಕಾಲೇಜಿನ ಪದವಿ ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್ ಹೇಳಿದರು.

ಅವರು ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಶಿಕ್ಷಕ ಪಾಲಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕ-ಪಾಲಕ ಜೊತೆಗೆ ಕಾಲೇಜು ಕೂಡ ಬಹುಮುಖ್ಯ ಪಾತ್ರವಹಿಸುತ್ತದೆ. ಪದವಿಯ ಹಂತದಲ್ಲಿ ಪಠ್ಯ ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳ ಅರಿವು ವಿದ್ಯಾರ್ಥಿಗಳಲ್ಲಿ ಮೂಡಿಸುವುದು ಅತ್ಯಗತ್ಯ. ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತವಾಗದೇ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅತ್ಯಗತ್ಯ. ಆಗಲೇ ಕಲಾ ವಿಭಾಗದ ವಿದ್ಯಾರ್ಥಿಗಳೂ ಕೂಡ ಸಮಾಜದಲ್ಲಿ ಹೆಮ್ಮೆಯಿಂದ ಬದುಕಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕ ಪಾಲಕ ಸಂಘದ ಅಧ್ಯಕ್ಷ ಶಿವಕುಮಾರ್, ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಪೋಷಕರು ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಅಶೋಕ್ ಡಿ’ಸೋಜಾ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಮಯ್ಯಾ ವಂದಿಸಿ, ಪದವಿ ವಿಭಾಗದ ಉಪನ್ಯಾಸಕಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.

Highslide for Wordpress Plugin