ರಾಜ್ಯಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಆಳ್ವಾಸ್‍ಗೆ ದ್ವಿತೀಯ ಸ್ಥಾನ


ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶ್ವೇತಾ ಎಸ್.ಜಿ., ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಫರ್ಧಾ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕ್ರೈಸ್ತ್ ಯುನಿವರ್ಸಿಟಿಯಲ್ಲಿ ಜರುಗಿದ ರಾಜ್ಯ ಮಟ್ಟದ ಈ ಸ್ಪರ್ಧೆಯಲ್ಲಿ ಸ್ಥಾನ ಪಡೆಯುದರೊಂದಿಗೆ ರೂ 9000 ನಗದು ಬಹುಮಾನಕ್ಕೂ ಭಾಜನರಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಚಾರ್ಯ ಪ್ರೋ ರಮೇಶ್ ಶೆಟ್ಟಿ ಹಾಗೂ ಇತರ ಉಪನ್ಯಾಸಕರು ಶ್ಲಾಘಿಸಿದ್ದಾರೆ.

Highslide for Wordpress Plugin