ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಡ್ಯ ಹಾಗೂ ಶ್ರೀ ಗಂಗಾಧರೇಶ್ವರ ಸ್ವಾಮಿ ಪದವಿಪೂರ್ವ ಕಾಲೇಜು ಆದಿಚಂಚನಗಿರಿ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.
ಫೈನಲ್ ಪಂದ್ಯದಲ್ಲಿ ಬೆಂಗಳೂರು ದಕ್ಷಿಣವನ್ನು ಪ್ರತಿನಿಧಿಸಿದ ಸುರಾನ ಪದವಿ ಪೂರ್ವ ಕಾಲೇಜು ತಂಡವನ್ನು 25-15, 25-15 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.